ಈ ಬೆನ್ನಲ್ಲೇ ಆರ್‌ಸಿಬಿ ಅಭಿಮಾನಿಗಳಿಗೆ ಖುಷಿ ನೀಡುವ ಹೇಳಿಕೆಯನ್ನು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ನೀಡಿದ್ದಾರೆ. ಕಳೆದ 12 ಐಪಿಎಲ್ ಆವೃತ್ತಿಯಲ್ಲಿ ನಿರಾಸೆ ಅನುಭವಿಸಿರುವ ಆರ್‌ಸಿಬಿ ತಂಡ ಈ ಬಾರಿ ಚಾಂಪಿಯನ್ ಆಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್.
ಆರ್‌ಸಿಬಿ ತಂಡ ಕಾಗದದಲ್ಲಿ ಯಾವಾಗಲೂ ಬಲಿಷ್ಠವಾಗಿಯೇ ಇರುವ ತಂಡ. ಆದರೆ ಆರ್‌ಸಿಬಿಗೆ ಚಾಂಪಿಯನ್ ಆಗುವ ಅವಕಾಶ ಈವರೆಗೆ ದೊರೆತಿಲ್ಲ. ಆದರೆ ಈ ಬಾರಿ ಅದು ಚಾಂಪಿಯನ್ ಪಟ್ಟಕ್ಕೇರಲಿದೆ ಎಂದಿದ್ದಾರೆ. ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟಕ್ಕೇರುವ ಸಾಧ್ಯತೆಯಿರುವ ಮತ್ತೊಂದು ತಂಡ ಎಂದಿದ್ದಾರೆ ಬ್ರಾಡ್ ಹಾಗ್.
ಆರ್‌ಸಿಬಿ ತಂಡಕ್ಕೆ ಈ ಬಾರಿ ಆರೋನ್ ಫಿಂಚ್ ಕೂಡ ಸೇರ್ಪಡೆಯಾಗುತ್ತಿದ್ದಾರೆ. ಪವರ್‌ಪ್ಲೇನಲ್ಲಿ ಅವರು ಬೌಲರ್‌ಗಳ ಮೇಲೆ ಸವಾರಿ ಮಾಡಲಿದ್ದಾರೆ. ಈ ವೇಳೆ ಸಾಕಷ್ಟು ರನ್ ಗಳಿಸಿ ಮಧ್ಯಮ ಕ್ರಮಾಂಕದ ಒತ್ತಡವನ್ನು ಕಡಿಮೆಮಾಡಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಅವರಂತಾ ಆಟಗಾರರು ಎದುರಾಳಿಗಳನ್ನು ದಂಡಿಸಲಿದ್ದಾರೆ ಎಂದು ಬ್ರಾಡ್ ಹಾಗ್ ಹೇಳಿದ್ದಾರೆ.
ಬೌಲಿಂಗ್ ವಿಭಾಗದಲ್ಲೂ ಆರ್‌ಸಿಬಿ ಬಲಿಷ್ಠವಾಗಿದೆ. ಡೇಲ್ ಸ್ಟೇನ್ ಹಾಗೂ ಕೇನ್ ರಿಚರ್ಡ್‌ಸನ್ ತಂಡದ ಸಮತೋಲನವನ್ನು ಈ ಹಿಂದಿನ ಟೂರ್ನಿಗಿಂತ ಹೆಚ್ಚುಗೊಳಿಸಲಿದ್ದಾರೆ. ಮಾತ್ರವಲ್ಲದೆ ಈ ಹಿಂದಿನ ಟೂರ್ನಿಯಲ್ಲಿ ಮಾಡಿದ ರಣತಂತ್ರಕ್ಕಿಂತ ಬೇರೆಯದ್ದೇ ರಣತಂತ್ರವನ್ನು ಹೆಣೆಯಲಿದ್ದಾರೆ ಎಂದು ಬ್ರಾಡ್ ಹಾಗ್ ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ