9/29/2020

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಎಬಿ ಡಿವಿಲಿಯರ್ಸ್

ದುಬೈ: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿದೆ. ಸೂಪರ್ ಓವರ್ ಕದನದಲ್ಲಿ ಗೆದ್ದ ಬೆಂಗಳೂರು ಕೂಟದ ಎರಡನೇ ಗೆಲುವು ಸಾಧಿಸಿದೆ.



ಆಕರ್ಷಕ ಅರ್ಧಶತಕ ಬಾರಿಸಿದ ಎಬಿ ಡಿವಿಲಿಯರ್ಸ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಐಪಿಎಲ್ ನಲ್ಲಿ 4500 ರನ್ ಗಡಿ ದಾಟಿದ ಎರಡನೇ ವಿದೇಶಿ ಆಟಗಾರನಾಗಿ ಹೊರಹೊಮ್ಮಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 24 ಎಸೆತಗಳನ್ನು ಎದುರಿಸಿದ ಎಬಿಡಿ ಅಜೇಯ 55 ರನ್ ಬಾರಿಸಿದ್ದರು. ನಾಲ್ಕು ಸಿಕ್ಸರ್ ನಾಲ್ಕು ಬೌಂಡರಿ ಬಾರಿಸಿದ ಎಬಿಡಿ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸುವಲ್ಲಿ ಸಹಾಯಕವಾಗಿದ್ದರು.

ಐಪಿಎಲ್ ನಲ್ಲಿ 4500 ರನ್ ಬಾರಿಸಿದ ಆರನೇ ಆಟಗಾರ, ಎರಡನೇ ವಿದೇಶಿ ಆಟಗಾರನಾಗಿ ಎಬಿಡಿ ಮೂಡಿಬಂದರು. ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ನಂತರ ಸುರೇಶ್ ರೈನಾ, ರೋಹಿತ್ ಶರ್ಮಾ, ಡೇವಿಡ್ ವಾರ್ನರ್ ಮತ್ತು ಶಿಖರ್ ಧವನ್ ಇದ್ದಾರೆ.


ಕಾಮೆಂಟ್‌ಗಳಿಲ್ಲ:

ಸಂಜು ಪ್ರತಿಭೆಯನ್ನು ಧೋನಿಗೆ ಹೋಲಿಸಿದ ಶಶಿ ತರೂರ್: ಗಂಭೀರ್ ಬಳಿಕ ಶ್ರೀಶಾಂತ್ ಆಕ್ಷೇಪ

 ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸತತ ಎರಡು ಇನ್ನಿಂಗ್ಸ್‌ಗಳಲ್ಲಿ ಶ್ರೇಷ್ಠ ಪ್ರದರ್ಶನವನ್ನು ನೀಡಿ ಮಿಂಚಿರುವ ಸಂಜು ಸ್ಯಾಮ್ಸನ್ ಪ್ರತಿಭೆಗೆ ಪ್ರಶಂಸೆಯ ಸುರಿಮಳೆಯೇ ಬಂದಿದ...