ದುಬೈ: ಆರಂಭಿಕ ಹಂತದಲ್ಲಿ ಎಡವಿದ್ದ ಮುಂಬೈ ತಂಡವನ್ನು ಇಶಾನ್ ಕಿಶನ್ ಹಾಗೂ ಪೊಲಾರ್ಡ್ ಒಂದು ಹಂತಕ್ಕೆ ತಂದಿದ್ದರು. ಆದರೂ ಪಂದ್ಯ ಟೈ ಆಗುವ ಮೂಲಕ ಸೂಪರ್ ಓವರ್ ತಲುಪಿತು. ಸೂಪರ್ ಓವರ್ ನಲ್ಲಿ ಆರ್ ಸಿಬಿ ಪಂದ್ಯವನ್ನು ತನ್ನದಾಗಿಸಿಕೊಳ್ಳುವ ಮೂಲಕ ಜಯಲಕ್ಷ್ಮಿಯನ್ನು ತನ್ನದಾಗಿಸಿಕೊಳ್ಳಿತು.
ಆರ್ ಸಿಬಿ ನೀಡಿದ್ದ 202ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಆರಂಭದ ಮೂರು ಓವರ್ ಗಳಲ್ಲೇ ಎರಡು ವಿಕೆಟ್ ಕಳೆದುಕೊಂಡಿತು. ಈ ಮೂಲಕ ಮೂರು ಓವರ್‍ನಲ್ಲೇ ಎರಡು ವಿಕೆಟ್ ಕಳೆದುಕೊಂಡು ಮುಂಬೈ ಇಂಡಿಯನ್ಸ್ ಮುಗ್ಗರಿಸಿತು. ಆರಂಭಿಕ ಆಟಗಾರ ಕಿಶನ್ 58 ಬಾಲ್‍ಗೆ 99 ರನ್ ಗಳಿಸಿದರು. ಅದ್ಭುತ ಪ್ರದರ್ಶನದಿಂದಾಗಿ ಒಂದು ಹಂತಕ್ಕೆ ತಲುಪಿತು. ಆದರೆ ಕಿಶನ್ ಹಾಗೂ ಪೋಲಾರ್ಡ್ ಪ್ರಯತ್ನ ವಿಫಲವಾಯಿತು. ಹೀಗಾಗಿ ಪಂದ್ಯ ಟೈ ಆಗುವ ಮೂಲಕ ಸೂಪರ್ ಓವರ್ ಹಂತ ತಲುಪಿತು.
ಸೂಪರ್ ಓವರ್ ನಲ್ಲಿ ನವದೀಪ್ ಸೈನಿ ಬೌಲಿಂಗ್ ಮಾಡಿದರು. ಪೋಲಾರ್ಡ್ ನಾಲ್ಕನೇ ಬಾಲ್‍ಗೆ ಫೋರ್ ಬಾರಿಸಿದರೆ, ಐದನೇ ಬಾಲ್‍ಗೆ ಕ್ಯಾಚ್ ನೀಡಿದರು. ನಂತರ 7 ರನ್ ಬಾರಿಸಿ ಆರ್‍ಸಿಬಿಗೆ 8ರನ್‍ಗಳ ಟಾರ್ಗೆಟ್ ನೀಡಿದರು. ಮುಂಬೈ ಪರ ಜಸ್‍ಪ್ರೀತ್ ಬುಮ್ರಾ ಬೌಲಿಂಗ್ ಮಾಡಿದರೆ, ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಜೊತೆಯಟವಾಡಿದರು. ಆರಂಭದ ಎರಡು ಬಾಲ್ ಸಿಂಗಲ್ಸ್ ನಂತರ ನಾಲ್ಕನೇ ಬಾಲ್‍ಗೆ ಡಿವಿಲಿಯರ್ಸ್ ಬೌಂಡರಿ ಬಾರಿಸಿದರು. ಮತ್ತೆ ಐದನೇ ಬಾಲ್ ಸಿಂಗಲ್ ತೆಗೆದುಕೊಂಡರೆ, ಕೊನೆಯ ಬಾಲ್‍ಗೆ ವಿರಾಟ್ ಕೊಹ್ಲಿ ಬೌಂಡರಿ ಬಾರಿಸಿದರು.